ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ಜಿಲ್ಲೆಯಲ್ಲಿ 25 ವರ್ಷದ ಮಹಿಳೆ ಮೇಲೆ ಮೂವರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಮಹಿಳೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಲಾಗಿದೆ. ತಲೆ ಹಾಗೂ ಖಾಸಗಿ ಭಾಗಗಳಿಗೆ ಗಾಯಗಳಾಗಿರುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಅಹಮದಾಬಾದ್ ಓಲ್ಡ್ ಸಿಟಿ ಪ್ರದೇಶದಲ್ಲಿ ಏಪ್ರಿಲ್ 17 ರಂದು ಮಹಿಳೆಯೊಬ್ಬರ ಮೃತದೇಹ ಕಂಡು ಬಂದಿದ್ದು, ಪರಿಶೀಲನೆ ನಡೆಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ತನಿಖೆ ಬಳಿಕ ಮೃತಪಟ್ಟ ಮಹಿಳೆಯ ಗುರುತು ಪತ್ತೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಗೊತ್ತಾಗಿದೆ.
ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಪತಿಗೆ ಇಬ್ಬರು ಮಕ್ಕಳಿದ್ದಾರೆ. ಏಪ್ರಿಲ್ 17 ರಂದು ಬೆಳಿಗ್ಗೆ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯನ್ನು ಮೂವರು ಆರೋಪಿಗಳು ಅಪಹರಿಸಿದ್ದಾರೆ. ಮಹಿಳೆಗೆ ಮಾದಕದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಖಾಸಗಿ ಭಾಗಗಳನ್ನು ಗಾಯಗೊಳಿಸಿದ್ದಾರೆ. ಮಹಿಳೆ ಮೃತಪಟ್ಟ ನಂತರ ಮೃತದೇಹ ಎಸೆದು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಹಮದಾಬಾದ್ ನಗರ ಸಹಾಯಕ ಪೊಲೀಸ್ ಆಯುಕ್ತ ಎಂ.ಎ. ಪಟೇಲ್ ತಿಳಿಸಿದ್ದಾರೆ.