ಬೆಂಗಳೂರು : 1000 ಶಿಕ್ಷಕರಿಗೆ ಭೋದನಾ ಸಂಪನ್ಮೂಲಕ್ಕೆ ಎಐ ತಂತ್ರಜ್ಞಾನ ಒದಗಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದಲ್ಲಿ ʼಶಿಕ್ಷಣ ಕೋಪೈಲಟ್ʼ ಆ್ಯಪ್ ರಚಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 750 ಶಾಲೆಗಳ ಒಂದು ಸಾವಿರ ಶಿಕ್ಷಕರಿಗೆ ಪ್ರಾಯೋಗಿಕವಾಗಿ ಒದಗಿಸಲಾಗುತ್ತಿದೆ. ಪ್ರಾರಂಭಿಕವಾಗಿ ನಾಲ್ಕು ಭಾಷೆಗಳ ಬೋಧನಾ ಸಂಪನ್ಮೂಲಗಳನ್ನು ಈ ಆ್ಯಪ್ ಒದಗಿಸುತ್ತದೆ. ಮುಂದಿನ ದಿನಗಳಲ್ಲಿ ಎಲ್ಲ ವಿಷಯಗಳಿಗೂ ಅನ್ವಯವಾಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.