ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ಅವರ ಪತ್ನಿ ವಿಜಯಲಕ್ಷೀ ಬುಧವಾರ ನಗರದ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕಳೆದ 10 ದಿನಗಳಿಂದ ಜಿಇಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾದರು. ಇಂದು ಬೆಳಗ್ಗೆ 5 ಗಂಟೆ ವೇಳೆಗೆ ಹೃದಯಾಘಾತಕ್ಕೆ ಒಳಗಾದ ಅವರಿಗೆ ವೈದ್ಯರು ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿಲ್ಲ. ಬೆಳಗ್ಗೆ 6.45ರ ವೇಳೆಗೆ 65ರ ಹರೆಯದ ವಿಜಯಲಕ್ಷೀ ಕೊನೆಯುಸಿರೆಳೆದರು.
ಇಲ್ಲಿದೆ ತಾಲಿಬಾನ್ ನಾಯಕನ ಕುರಿತ ಕುತೂಹಲಕಾರಿ ಮಾಹಿತಿ
ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಹಿರಿಯ ಸಚಿವರು, ಎಐಎಡಿಎಂಕೆ ಪಕ್ಷದ ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿದರು.