alex Certify AICC ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

AICC ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ

ಇತ್ತೀಚೆಗೆ ನಡೆದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆಯವರು ಗೆಲವು ಸಾಧಿಸಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಭಾರಿ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.

ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲು ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 26ರ ನಾಳೆ (ಬುಧವಾರ) ನವದೆಹಲಿಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ನಡೆಸುತ್ತಿರುವ ʼಭಾರತ್ ಜೋಡೋʼ ಯಾತ್ರೆಗೆ ದೀಪಾವಳಿ ನಿಮಿತ್ತ ಮೂರು ದಿನಗಳ ರಜೆ ಘೋಷಿಸಲಾಗಿದ್ದು, ಹೀಗಾಗಿ ನಾಳೆ ನಡೆಯಲಿರುವ ಖರ್ಗೆ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...