alex Certify BIG NEWS: AICC ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ಚುನಾವಣೆ; ಖರ್ಗೆ ಆಯ್ಕೆ ಬಹುತೇಕ ಖಚಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: AICC ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ಚುನಾವಣೆ; ಖರ್ಗೆ ಆಯ್ಕೆ ಬಹುತೇಕ ಖಚಿತ

Who will replace Mallikarjun Kharge as Leader of Opposition in Rajya Sabha? Read here | India News | Zee Newsಅಕ್ಟೋಬರ್ 17ರ ಸೋಮವಾರದಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಕಣದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ಶಶಿ ತರೂರ್ ಇದ್ದು, ಖರ್ಗೆಯವರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲೂ ಮತದಾನಕ್ಕೆ ಸಿದ್ಧತೆ ನಡೆದಿದ್ದು, ಒಟ್ಟು 494 ಮಂದಿ ತಮ್ಮ ಮತ ಚಲಾಯಿಸಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, 479 ಪಿಸಿಸಿ ಪ್ರತಿನಿಧಿಗಳು, 15 ಶಾಸಕಾಂಗ ಪಕ್ಷದ ಸದಸ್ಯರು ಮತದಾನ ಮಾಡಲಿದ್ದಾರೆ.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಲ್ಲ ಶಾಸಕರು, ರಾಜ್ಯಸಭೆ ಹಾಗೂ ಲೋಕಸಭಾ ಸದಸ್ಯರು ಅಕ್ಟೋಬರ್ 16ರ ಭಾನುವಾರ ಸಂಜೆ ಒಳಗಾಗಿ ಬೆಂಗಳೂರಿಗೆ ಆಗಮಿಸುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...