ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾಗಾಂಧಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಎಐಸಿಸಿ ಶಿಸ್ತು ಕ್ರಮ ಸಮಿತಿಯನ್ನು ಪುನರ್ ರಚನೆ ಮಾಡಿದ್ದಾರೆ.
ಸಮಿತಿ ಸದಸ್ಯರಾಗಿ ಮಾಜಿ ಉಪಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ನಾಯಕ ಡಾ.ಜಿ. ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ.
ಎಐಸಿಸಿ ಶಿಸ್ತುಕ್ರಮ ಸಮಿತಿ ಅಧ್ಯಕ್ಷರಾಗಿ ಎ.ಕೆ. ಆಂಟನಿ, ಸದಸ್ಯರಾಗಿ ಅಂಬಿಕಾ ಸೋನಿ, ಜೈಪ್ರಕಾಶ್ ಅಗರವಾಲ್, ಡಾ.ಜಿ. ಪರಮೇಶ್ವರ್ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ತಾರಿಕ್ ಅನ್ವರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.