ಬೆಳಗಾವಿ: ಕಾಂಗ್ರೆಸ್ ಇತಿಹಾಸದಲ್ಲಿ ಇಂದು ಐತಿಹಾಸಿಕ ಸಭೆ ಆಗಿದೆ. ಸಭೆಯಲ್ಲಿ ಎರಡು ಮಹತ್ವದ ನಿರ್ಣಯ ಕೈಗೊಂಡಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಸಿಡಬ್ಲ್ಯೂಸಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2025 ರಲ್ಲಿ ಸಂಘಟನೆಗೆ ಪರಿವರ್ತನೆ ತರಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬೂತ್ ಮಟ್ಟದಿಂದ ಮೇಲಿನ ಹಂತದವರೆಗೂ ಬದಲಾವಣೆ ತರಲಾಗುವುದು. ಸಂಘಟನೆಯ ದೃಷ್ಟಿಯಿಂದ ಮಹತ್ವದ ಬದಲಾವಣೆ ಮಾಡುತ್ತೇವೆ. ನಾಯಕತ್ವ ಯಾರಿಗೆ ಇದೆಯೋ ಅವರಿಗೆ ಅವಕಾಶ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಗಾಂಧೀಜಿ ಎಐಸಿಸಿ ಅಧ್ಯಕ್ಷರಾಗಿ ಸಮ್ಮೇಳನ ನಡೆಸಿದ ಸ್ಥಳ ಇದಾಗಿದೆ. 100 ವರ್ಷದ ನಂತರ ಮತ್ತೆ ಇದೇ ಸ್ಥಳದಲ್ಲಿ ಸಭೆ ನಡೆದಿದೆ. ಅದೇ ಪರಂಪರೆ ನಾವು ಮುಂದುವರೆಸಿಕೊಂಡು ಬಂದಿದ್ದೇವೆ ಎಂದು ಹೇಳಿದ್ದಾರೆ.
ಮಹಾತ್ಮ ಗಾಂಧೀಜಿ ಹಾದಿಯಲ್ಲಿ ನಾವು ನಡೆಯಬೇಕೆಂದು ತೀರ್ಮಾನಿಸಲಾಗಿದೆ ಎಂದು ಸಿಡಬ್ಲ್ಯೂಸಿ ಸಭೆಯ ಬಳಿಕ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. 2025ರ ಫೆಬ್ರವರಿ ಇಂದ ನವೆಂಬರ್ ನಡುವೆ ಸಭೆ ನಡೆಯುವುದಿಲ್ಲ. ಇದು ಪಕ್ಷ ಸಂಘಟನೆಯ ವರ್ಷ ಎಂದು ಹೇಳಿದ್ದಾರೆ.