ಛತ್ತೀಸಗಢ : ಐಇಡಿ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ಓರ್ವ ಗಾಯಗೊಂಡ ಘಟನೆ ನಾರಾಯಣಪುರ ಜಿಲ್ಲೆಯ ಕಬ್ಬಿಣದ ಅದಿರು ಗಣಿ ಪ್ರದೇಶದಲ್ಲಿ ನಡೆದಿದೆ.
ನಕ್ಸಲರು ಇಟ್ಟಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ರಾಯ್ಪುರದಿಂದ ಸುಮಾರು 350 ಕಿ.ಮೀ ದೂರದಲ್ಲಿರುವ ಛೋಟೆ ಡೊಂಗರ್ ಪೊಲೀಸ್ ಠಾಣೆ ವ್ಯಾಪ್ತಿಯ ಬೆಟ್ಟದ ಮೇಲಿರುವ ಆಮ್ಡೈ ಘಾಟಿ ಕಬ್ಬಿಣದ ಅದಿರು ಗಣಿಯಲ್ಲಿ ಮೂವರು ಕಾರ್ಮಿಕರು ಕೆಲಸಕ್ಕೆ ತೆರಳುತ್ತಿದ್ದಾಗ ಬೆಳಿಗ್ಗೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಯಸ್ವಾಲ್ ನೆಕೊ ಇಂಡಸ್ಟ್ರೀಸ್ ಲಿಮಿಟೆಡ್ (ಜೆಎನ್ಐಎಲ್) ಗೆ ಆಮ್ಡೈ ಘಾಟಿಯಲ್ಲಿ ಕಬ್ಬಿಣದ ಅದಿರು ಗಣಿಯನ್ನು ಮಂಜೂರು ಮಾಡಲಾಗಿದೆ ಮತ್ತು ನಕ್ಸಲರು ಈ ಯೋಜನೆಯನ್ನು ದೀರ್ಘಕಾಲದಿಂದ ವಿರೋಧಿಸುತ್ತಿದ್ದಾರೆ ಎಂದು ಹೇಳಲಾಗಿದೆ.