ಬೆಂಗಳೂರು: ಏರ್ ಇಂಡಿಯಾ ವಿಮಾನದ ಸಿಬ್ಬಂದಿಗಳಿಗೆ ಪ್ರಯಾಣಿಕನೊಬ್ಬ ತಾನೊಬ್ಬ ಉಗ್ರ ಎಂದು ಹೇಳಿ ಬೆದರಿಕೆ ಹಾಕಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಆದರ್ಶ್ ಕುಮಾರ್ ಸಿಂಗ್ ಎಂಬಾತ ಫೆ.17ರಂದು ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ. ವಿಮಾನ ಹತ್ತಲು ಮುಂದಾಗಿದ್ದ ಆತ ಕೊನೇ ಕ್ಷಣದಲ್ಲಿ ಹಿಂತಿರುಗಿ ವಾಪಸ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಏರ್ ಇಂಡಿಯಾ ಸಿಬ್ಬಂದಿ ಭದ್ರತಾ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಏರ್ ಇಂಡಿಯಾ ಭದ್ರತಾ ಪಡೆ ಸಿಬ್ಬಂದಿಗಳು ಆತನನ್ನು ವಿಮಾನ ಹತ್ತದೇ ಯಾಕೆ ವಾಪಾಸ್ ಆಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ಭದ್ರತಾ ಸಿಬ್ಬಂದಿ ಪ್ರಶ್ನೆಗೆ ಆದರ್ಶ್ ಕುಮಾರ್ ಸಿಂಗ್ ತಾನು ಭಯೋತ್ಪಾದಕ ಗುಂಪಿಗೆ ಸೇರಿದವನು. ನಾನು ಲಖನೌಗೆ ತೆರಳಲ್ಲ ಎಂದು ಹೇಳಿದ್ದಾನೆ. ಅಲ್ಲದೇ ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ. ತಕ್ಷಣ ಭದ್ರತಾ ಸಿಬ್ಬಂದಿ ಆತನನ್ನು ವಶಕ್ಕೆ ಪಡೆದು ಕೆಂಪೇಗೌಡ ಏರ್ ಪೋರ್ಟ್ ಪೊಲೀಸರಿಗೆ ಒಪ್ಪಿಸಿದ್ದಾರೆ.