alex Certify BREAKING NEWS: ನಿಲ್ದಾಣದಲ್ಲೇ ವಿದ್ಯುತ್ ಕಂಬಕ್ಕೆ ಬಡಿದ ವಿಮಾನದ ರೆಕ್ಕೆ, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ 63 ಪ್ರಯಾಣಿಕರು ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಿಲ್ದಾಣದಲ್ಲೇ ವಿದ್ಯುತ್ ಕಂಬಕ್ಕೆ ಬಡಿದ ವಿಮಾನದ ರೆಕ್ಕೆ, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ 63 ಪ್ರಯಾಣಿಕರು ಪಾರು

ವಿಜಯವಾಡ: ಒಮಾನ್ ನಿಂದ 64 ಪ್ರಯಾಣಿಕರೊಂದಿಗೆ ಬಂದಿಳಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ 63 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಒಮಾನ್ ನಿಂದ ಆಂಧ್ರಪ್ರದೇಶದ ಗನ್ನಾವರಂ ವಿಜಯವಾಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯ ಎಕ್ಸ್ಪ್ರೆಸ್ ವಿಮಾನ ಆಗಮಿಸಿದ್ದು, ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ನಿಯಂತ್ರಣ ಕಳೆದುಕೊಂಡ ವಿಮಾನ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ್ದು, ವಿಮಾನದ ರೆಕ್ಕೆ ವಿದ್ಯುತ್ ಕಂಬಕ್ಕೆ ತಾಗಿದೆ.

ಅದೃಷ್ಟವಶಾತ್ ಹೆಚ್ಚಿನ ಅನಾಹುತವಾಗಿಲ್ಲ. ಕೂಡಲೇ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಘಟನೆ ನಡೆದಿದೆ. ನಿಯಂತ್ರಣ ಕಳೆದುಕೊಂಡ ವಿಮಾನದ ರೆಕ್ಕೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಅಪ್ಪಳಿಸಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...