ನವದೆಹಲಿ: ಬಾಯ್ ಫ್ರೆಂಡ್ ‘ನಾನ್ ವೆಜ್’ ತಿನ್ನಬೇಡ ಎಂದಿದ್ದಕ್ಕೆ ಏರ್ ಇಂಡಿಯಾ ಪೈಲಟ್ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ, 25 ವರ್ಷದ ಏರ್ ಇಂಡಿಯಾ ಪೈಲಟ್ ಸೋಮವಾರ ಬೆಳಿಗ್ಗೆ ಮುಂಬೈನ ಅಂಧೇರಿಯಲ್ಲಿರುವ ತನ್ನ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೆಹಲಿಯಲ್ಲಿ 27 ವರ್ಷದ ಯುವಕನನ್ನು ಬಂಧಿಸಲಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾಂಸಾಹಾರಿ ಆಹಾರವನ್ನು ಸೇವಿಸಿದ್ದಕ್ಕಾಗಿ ಅವಮಾನಿಸಿದ್ದಾನೆ ಎಂದು ಆಕೆಯ ಕುಟುಂಬ ಹೇಳಿಕೊಂಡಿದೆ.
ಪೊಲೀಸರ ಪ್ರಕಾರ, ಸೃಷ್ಟಿ ತುಲಿ ಉತ್ತರ ಪ್ರದೇಶದ ಗೋರಖ್ಪುರ ಮೂಲದವರಾಗಿದ್ದು, ಆದಿತ್ಯನಿಂದ ನಿಂದಿಸಲ್ಪಟ್ಟಿದ್ದಾರೆ ಎನ್ನಲಾಗಿದೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
ಗುರುಗ್ರಾಮದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾಂಸಾಹಾರ ಸೇವಿಸಿದ್ದಕ್ಕಾಗಿ ಆದಿತ್ಯ ಇತರರ ಮುಂದೆ ಅವಮಾನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಚಾರಕ್ಕೆ ಇಬ್ಬರ ನಡುವೆ ವಾಗ್ವಾದ ಪ್ರಾರಂಭವಾಯಿತು, ನಂತರ ಆದಿತ್ಯ ಅವಳನ್ನು ಮಧ್ಯದಲ್ಲಿ ಬಿಟ್ಟು ಮನೆಗೆ ಹೋಗಿದ್ದಾನೆ.ನಂತರ ಸೃಷ್ಟಿ ಅವನಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳಲಿದ್ದೇನೆ ಎಂದು ಹೇಳಿದಳು, ನಂತರ ಆದಿತ್ಯ ಸೃಷ್ಟಿಯಿದ್ದ ರೂಮ್ ಗೆ ಹಿಂದಿರುಗಿದನು . ಆದರೆ ಬಾಗಿಲು ಲಾಕ್ ಆಗಿತ್ತು,
ಆದಿತ್ಯ ಕೀ ಮೇಕರ್ ಸಹಾಯದಿಂದ ಬೀಗವನ್ನು ಒಡೆದು ನೋಡಿದಾಗ ಅವಳು ಪ್ರಜ್ಞಾಹೀನಳಾಗಿರುವುದು ಕಂಡುಬಂದಿದೆ. ಕೂಡಲೇ ಆತ ಸೃಷ್ಟಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾನೆ, ಆದರೆ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.ಆದಿತ್ಯ ತನ್ನನ್ನು ನಿಂದಿಸುತ್ತಿದ್ದ ಎಂದು ಆರೋಪಿಸಿ ಆಕೆಯ ಕುಟುಂಬ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ.