alex Certify ಏರ್ ಇಂಡಿಯಾ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಹೋಟೆಲ್ ರೂಮ್ ಗೆ ನುಗ್ಗಿ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಹೋಟೆಲ್ ರೂಮ್ ಗೆ ನುಗ್ಗಿ ಕೃತ್ಯ

ಏರ್ ಇಂಡಿಯಾ ಮಹಿಳಾ ಸಿಬ್ಬಂದಿಯ ಮೇಲೆ ಕಾಮುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಹಾಗೂ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಲಂಡನ್ ನ ಹೋಟೆಲ್ ನಲ್ಲಿ ತಂಗಿದ್ದ ಏರ್ ಇಂಡಿಯಾ ಮಹಿಳಾ ಸಿಬ್ಬಂದಿ ಮೇಲೆ ಈ ಕೃತ್ಯವೆಸಗಲಾಗಿದೆ. ಹೋಟೆಲ್ ರೂಮ್ ಗೆ ನುಗ್ಗಿದ ವ್ಯಕ್ತಿಯೋರ್ವ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಸದ್ಯ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಏರ್ ಇಂಡಿಯಾ ಕೂಡ ಮಾಹಿತಿ ನೀಡಿದ್ದು, ರಾತ್ರಿ ಲಂಡನ್ ಹೋಟೆಲ್ ನಲ್ಲಿ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯೊಬ್ಬರ ಮೇಲೆ ಅಪರಿಚಿತ ವ್ಯಕ್ತಿ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ನಡೆಸಿದ್ದಾನೆ. ಲಂಡನ್ ನ ಹಿಥ್ರೂನಲ್ಲಿರುವ ರಾಡಿಸನ್ ರೆಡ್ ಹೋಟೆಲ್ ನಲ್ಲಿ ಏರ್ ಇಂಡಿಯಾದ ಹಲವು ಸಿಬ್ಬಂದಿಗಳು ತಂಗಿದ್ದರು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಮಹಿಳಾ ಸಿಬ್ಬಂದಿ ಮಲಗಿದ್ದ ವೇಳೆ ರಾತ್ರಿ 1:30ರ ಸುಮಾರಿಗೆ ಏಕಾಏಕಿ ನುಗ್ಗಿದ ವ್ಯಕ್ತಿ ಮಹಿಳಾ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಮಹಿಳಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲಿಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...