![](https://kannadadunia.com/wp-content/uploads/2025/02/air-show-uta.jpg)
ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ಏರ್ ಶೋ ನಡೆಯುತ್ತಿದ್ದು, ಭದ್ರತೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ್ದ ಊಟದಲ್ಲಿ ಮತ್ತೆ ಹುಳ ಪತ್ತೆಯಾಗಿದೆ.
ಏರ್ ಶೋ ರಿಹರ್ಸಲ್ ಗೆ ನಿನ್ನೆ ಬಂದಿದ್ದ ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಜಿರಳೆ ಪತ್ತೆಯಾಗಿತ್ತು. ಗುಣಮಟ್ಟ, ಸ್ವಚ್ಛತೆ ಇಲ್ಲದ ಆಹಾರ ಪೂರೈಕೆಯಾಗಿರುವುದಕ್ಕೆ ಪೊಲೀಸರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ಇಂದು ಮಧ್ಯಾಹ್ನ ಪೊಲೀಸ್ ಸಿಬ್ಬಂದಿಗಳಿಗೆ ನೀಡಿದ್ದ ಊಟದಲ್ಲಿಯೂ ಹುಳ ಪತ್ತೆಯಾಗಿದ್ದು, ಗುಣಮಟ್ಟದ ಬಗ್ಗೆ ಮತ್ತೆ ಮತ್ತೆ ಪ್ರಶ್ನೆ ಮೂಡುವಂತೆ ಮಾಡಿದೆ.
ಭದ್ರತೆಗೆ ನಿಯೋಜಿಸಿದ್ದ ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದ ಜೊತೆಗಿನ ಸಿಹಿ ತಿನಿಸಿನಲ್ಲಿ ಹುಳ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನಿನ್ನೆಯಷ್ಟೇ ಗುಣಮಟ್ಟದ ಆಹಾರ ಪೂರೈಸುವಂತೆ ಕಮಿಷನರ್ ಸೂಚಿಸಿದ್ದರು. ಆದಾಗ್ಯೂ ಇಂದು ಸಿಹಿ ತಿನಿಸಿನಲ್ಲಿ ಹುಳ ಕಂಡುಬಂದಿರುವುದು ಪೊಲೀಸ್ ಸಿಬ್ಬಂದಿಗಳು ಬೇಸರ ವ್ಯಕ್ತಪಡಿಸಿದ್ದಾರೆ.