![](https://kannadadunia.com/wp-content/uploads/2025/01/traffice-bengaluru.png)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ಮೆಟ್ರೋ ಪ್ರಯಾಣ ದರ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ಸಂಚಾರ ದಟ್ಟಣೆ ಶುರುವಾಗಿದ್ದರೆ, ಮತ್ತೊಂದೆಡೆ ಏರೋ ಇಂಡಿಯಾ ಏರ್ ಶೋ ಹಿನ್ನೆಲೆಯಲ್ಲಿ ಯಲಹಂಕ ಭಾಗದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಇದರಿಂದಾಗಿ ಏರ್ ಪೋರ್ಟ್ ಗೆ ತೆರಳುವ ಪ್ರಯಾಣಿಕರು ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಏರ್ ಶೋನಿಂದಾಗಿ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿಗದಿತ ಸಮಯಕ್ಕೆ ತಲುಪಲು ಸಾಧ್ಯವಾಗದೇ ಪ್ರಯಾಣಿಕರು ಸಂಕಷ್ಟಕ್ಕೀಡಾಗುತ್ತಿದ್ದಾರೆ.
ಏರ್ ಪೋರ್ಟ್ ಗೆ ತಲುಪಲು ಪ್ರಯಾಣಿಕರು ಪರ್ಯಾಯ ಮಾರ್ಗ ಬಳಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರ ಸೂಚನೆ ನೀಡಿದೆ.
ಫೆ.12ರಿಂದ ಫೆ.14ರವರೆಗೆ ಹೆಬ್ಬಾಳ ಮೇಲ್ಸೇತುವೆ ಮೇಲೆ ಸಂಚಾರ ದಟ್ಟಣೆ ಇರಲಿದೆ. ಈ ಹಿನ್ನೆಲೆಯಲ್ಲಿ ಏರ್ ಪೋರ್ಟ್ ತಲುಪುವ ಪ್ರಯಾಣಿಕರು ಬದಲಿ ಮಾರ್ಗ ಅನುಸರಿಸುವಂತೆ ಸೂಚಿಸಲಾಗಿದೆ.