ಬೆಳಗಾವಿ: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲಾಗಿದೆ.
ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ. ಪಾಟೀಲ ಮಸೂದೆ ಮಂಡಿಸಿದ್ದಾರೆ. ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು
ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ನಾಮಕರಣ ಮಾಡಲು ನಿರ್ಣಯಿಸಿದ್ದು, ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು.