
ಬೆಂಗಳೂರು: ವಂಚನೆ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಹರೀಶ್ ಅವರನ್ನು ಮತ್ತೆ ಬಂಧಿಸಲಾಗಿದೆ.
ಬೆಂಗಳೂರಿನ ಆರ್.ಆರ್. ನಗರ ಠಾಣೆ ಪೋಲೀಸರು ಶಿಲ್ಪಾ ಗೌಡ ನೀಡಿದ್ದ ವಂಚನೆ ಪ್ರಕರಣ ಸಂಬಂಧ ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಅವರನ್ನು ಬಂಧಿಸಿದ್ದಾರೆ.
3.5 ಕೋಟಿ ರೂಪಾಯಿ ಮೌಲ್ಯದ 430 ಗ್ರಾಂ ಚಿನ್ನ ಪಡೆದು ವಂಚಿಸಲಾಗಿದೆ ಎಂದು ಆರ್.ಆರ್. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಚಂದ್ರಾ ಲೇಔಟ್ ವಂಚನೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.
ಆರ್.ಆರ್. ನಗರ ಠಾಣೆ ಪೋಲೀಸರು ಐಶ್ವರ್ಯ ಗೌಡ ಮತ್ತು ಪತಿ ಹರೀಶ್ ಅವರನ್ನು ಬಂಧಿಸಿ ನಾಲ್ಕನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಇಬ್ಬರನ್ನೂ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಹೈಕೋರ್ಟ್ ನೀಡಿದ ಜಾಮೀನು ಆದೇಶದ ಪ್ರತಿಯನ್ನು ಅವರ ವಕೀಲರ ಸಲ್ಲಿಸಿದ್ದು, ನ್ಯಾಯಾಧೀಶರು ಹೈಕೋರ್ಟ್ ನೀಡಿದ ಜಾಮೀನು ಆದೇಶದ ಪ್ರತಿ ಪರಿಶೀಲನೆ ನಡೆಸಿದ್ದಾರೆ.