ಮಂಡ್ಯ: ಬೆಂಗಳೂರಿನಲ್ಲಿ ಚಿನದಂಗಡಿ ಮಾಲಕಿಗೆ ವಂಚಿಸಿದ್ದ ಐಶ್ವರ್ಯ ಗೌಡ ವಿರುದ್ಧ ಹಲವಾರು ವಂಚನೆ ಪ್ರಕರಣಗಳು ದಾಖಲಾಗಿವೆ. ಸಾಲು ಸಾಲು ಎಫ್ ಐ ಆರ್ ದಾಖಲಾಗುತ್ತಿವೆ.
ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಐಶ್ವರ್ಯ ಗೌಡ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಮಂಡ್ಯದಲ್ಲಿ ಮತ್ತೊಂದು ಎಫ್ ಐಆರ್ ದಾಖಲಾಗಿದೆ.
ಮಂಡ್ಯದ ಚಾಮುಂಡೇಶ್ವರಿ ನಗರದ ನಿವಾಸಿ ಭಾಗ್ಯಾಮ್ಮ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಅಶ್ವರ್ಯ ಗೌಡ ವಿರುದ್ಧ ಐಪಿಸಿ ಸೆಕ್ಷನ್ 406, 420, 417, 120ಬಿ, 540, 34ರ ಅಡಿ ಕೇಸ್ ದಾಖಲಾಗಿದೆ.
ಇದೇ ವೇಳೆ ಐಶ್ವರ್ಯ ಗೌಡ ಪತಿ ಹರೀಶ್ ಗೌಡ, ಸಹೋದರ ಮಂಜುನಾಥ್ ಆಗೂ ಯಶವಂತ್ ಎಂಬುವವರ ವಿರುದ್ಧವೂ ಪ್ರಕರಣ ದಾಖಲಾಗಿದೆ.