alex Certify ಶೀಘ್ರವೇ ಅಜಿತ್ ಪವಾರ್ ಸಿಎಂ ಶಿಂಧೆಯನ್ನು ಕೆಳಗಿಳಿಸಲಿದ್ದಾರೆ: ಸಂಜಯ್ ರಾವುತ್ ಸ್ಫೋಟಕ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೀಘ್ರವೇ ಅಜಿತ್ ಪವಾರ್ ಸಿಎಂ ಶಿಂಧೆಯನ್ನು ಕೆಳಗಿಳಿಸಲಿದ್ದಾರೆ: ಸಂಜಯ್ ರಾವುತ್ ಸ್ಫೋಟಕ ಮಾಹಿತಿ

Ajit Pawar will replace Shinde, 16 MLAs of CM to be disqualified soon: Sanjay Raut - India Today

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್ ಸಿ ಪಿಯ ಅಜಿತ್ ಪವಾರ್ ಶೀಘ್ರದಲ್ಲೇ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಕೆಳಗಿಳಿಸಲಿದ್ದಾರೆ ಎಂದು ಸಂಜಯ್ ರಾವುತ್ ಹೇಳಿದ್ದಾರೆ.

ಶೀಘ್ರದಲ್ಲೇ ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಲಾಗುವುದು ಮತ್ತು ಶಿವಸೇನೆಯ 16 ಬಂಡಾಯ ಶಾಸಕರನ್ನು ಅನರ್ಹಗೊಳಿಸಲಾಗುವುದು ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

“ಬಿಜೆಪಿಯು ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಅನ್ನು ಒಡೆಯುತ್ತಿದೆ. ಆದರೆ ಇದರಿಂದ ಅವರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಮಹಾರಾಷ್ಟ್ರದಲ್ಲಿ ನಾವು 2024 ರ ಚುನಾವಣೆಯಲ್ಲಿ ಒಟ್ಟಾಗಿ ಹೋರಾಡುತ್ತೇವೆ. ಎನ್‌ಸಿಪಿ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಇದೀಗ ಎನ್ ಸಿ ಪಿ ನಾಯಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಆಘಾತಕಾರಿಯಾಗಿದೆ ಎಂದು ಅವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...