ಉದ್ಯಮದಲ್ಲಿ ಮಹಿಳೆಯರ ಉಪಸ್ಥಿತಿಯನ್ನು ಹೆಚ್ಚಿಸಲು ಸರ್ಕಾರವು ಅವರ ವ್ಯವಹಾರಗಳಿಗೆ ಅಥವಾ ಸ್ಟಾರ್ಟ್ಅಪ್ ಗಳಿಗೆ ನೇರ ಲೋನ್ ಮೂಲಕ ಬೆಂಬಲ ನೀಡಲು ಮುಂದಾಗಿದೆ.
ಕರ್ನಾಟಕ ಇನ್ನೋವೇಶನ್ ಮತ್ತು ಟೆಕ್ನಾಲಜಿ ಸೊಸೈಟಿ ಗುರುತಿಸಿರುವ ಮಹಿಳಾ ಉದ್ಯಮಿಗಳು ಮತ್ತು ಮಹಿಳಾ ನೇತೃತ್ವದ ಸ್ಟಾರ್ಟ್‌ಅಪ್‌ಗಳಿಗೆ 10 ಲಕ್ಷ ರೂ. ನೇರ ಸಾಲ ನೀಡಲಾಗುವುದು ಎಂದು ಬೊಮ್ಮಾಯಿ ಘೋಷಿಸಿದ್ದಾರೆ. ಈ ಸಾಲಗಳನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ನೀಡಲಾಗುವುದು.
WAR BREAKING: ರಷ್ಯನ್ ಸೇನೆಯಿಂದ ಉಕ್ರೇನ್ ಮಹಿಳೆಯರ ಮೇಲೆ ಅತ್ಯಾಚಾರ; ವಿದೇಶಾಂಗ ಸಚಿವರ ಗಂಭೀರ ಆರೋಪ
ಅಲ್ಲದೆ, ಎಸ್‌ಸಿ/ಎಸ್‌ಟಿ ಸಮುದಾಯದ 300 ಮಹಿಳಾ ಪದವೀಧರರಿಗೆ ಉದ್ಯಮಿಗಳಾಗಲು ಸಹಾಯ ಮಾಡಲು, ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನ ಐಐಎಂ ಮೂಲಕ ಇದನ್ನು ಸುಗಮಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಅವಿವಾಹಿತ, ವಿಚ್ಛೇದಿತ ಮಹಿಳೆಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರ ಮಾಸಿಕ ಪಿಂಚಣಿಯನ್ನು 600 ರಿಂದ 800 ರೂಪಾಯಿಗೆ ಹೆಚ್ಚಿಸಲಾಗುವುದು, ಇದರಿಂದ 1.32 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಜೆಟ್ ಮಂಡನೆ ವೇಳೆ ಹೇಳಿದರು. ಇದಲ್ಲದೆ, ಆಸಿಡ್ ಸಂತ್ರಸ್ತ ಮಹಿಳೆಯರ ಮಾಸಿಕ ಪಿಂಚಣಿಯನ್ನು 3,000 ರೂ.ನಿಂದ 10,000 ರೂ.ಗೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.