
ದಾವಣಗೆರೆ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂಕಂದಾಯ ಕಾಯ್ದೆ ತಿದ್ದುಪಡಿ ಮಾಡಿದ ತರುವಾಯ ನಮೂನೆ-50-53 ರಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಮತ್ತೊಮ್ಮೆ ನಮೂನೆ-57 ರಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶವಿಲ್ಲ.
ಸರ್ಕಾರದ ಆದೇಶದ ಸಂಖ್ಯೆ: ಆರ್.ಡಿ 02 ಎಲ್.ಜಿ.ಬಿ 2022(ಭಾ-1) ಜೂ.18 ರ ಆದೇಶದಂತೆ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ನಮೂನೆ-57 ರಲ್ಲಿ ಅರ್ಜಿಯನ್ನು ಸಲ್ಲಿಸಲು ಮೇ.30 ರಿಂದ ಒಂದು ವರ್ಷದ ಅವಧಿಯವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.