ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಜಾಗದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿಕೊಂಡವರಿಗೆ ಸಕ್ರಮಕ್ಕಾಗಿ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದೆ.
ಬಿಡಿಎಯಿಂದ ಭೂಸ್ವಾಧೀನಕ್ಕೆ ಒಳಪಟ್ಟ ಜಮೀನಿನಲ್ಲಿ 12 ವರ್ಷಗಳ ಹಿಂದೆ ವಾಸಕ್ಕೆ ಮನೆ ನಿರ್ಮಿಸಿಕೊಂಡಿದ್ದವರು ಮರುಮಂಜೂರಾತಿ ವ್ಯಾಪ್ತಿಯಲ್ಲಿ ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಅನಧಿಕೃತ ಕಟ್ಟಡದಾರರಿಗೆ ನೋಟಿಸ್ ಜಾರಿ ಮಾಡಿ ದಾಖಲೆಯೊಂದಿಗೆ ಶುಲ್ಕ ಪಾವತಿಸಿ ಸಕ್ರಮಕ್ಕೆ ಅವಕಾಶ ನೀಡಲಾಗಿದೆ. ಮೊದಲ ಹಂತದಲ್ಲಿ ಪಿಲ್ಲಣ್ಣ ಗಾರ್ಡನ್ ಮೂರನೇ ಹಂತದ ಬಡಾವಣೆಯಲ್ಲಿ 783 ಕಟ್ಟಡಗಳಲ್ಲಿ 516 ಕಟ್ಟಡದಾರರಿಗೆ ಅವಕಾಶ ನೀಡಲಾಗಿದೆ. ಅದೇ ರೀತಿ, ಅನಧಿಕೃತ ಕಟ್ಟಡಗಳು ಗುರುತಿಸಲಾಗಿದ್ದು, ಹಂತಹಂತವಾಗಿ ಉಳಿದ ಬಡಾವಣೆಗಳಿಗೆ ನೋಟಿಸ್ ಜಾರಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ.