ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಅಕ್ರಮ -ಸಕ್ರಮ ಯೋಜನೆ ಜಾರಿಗೊಳಿಸಲಾಗುವುದು.
ಮಾಸಾಂತ್ಯಕ್ಕೆ ಅಕ್ರಮ -ಸಕ್ರಮ ಯೋಜನೆ ಜಾರಿಗೊಳಿಸುವ ಬಗ್ಗೆ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಯೋಜನೆ ಜಾರಿಗೆ ಕರಡು ಅಧಿಸೂಚನೆ ಸಿದ್ಧಪಡಿಸಿದ್ದು, ಆಗಸ್ಟ್ ಅಂತ್ಯದೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ನಗರ ಅಭಿವೃದ್ಧಿ ಸಚಿವ ಭೈರತಿ ಬಸವರಾಜ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಆಕ್ರಮ -ಸಕ್ರಮ ಜಾರಿಗೆ ಕೋರ್ಟ್ ತಡೆಯಾಜ್ಞೆ ಇರುವುದರಿಂದ ಬೆಂಗಳೂರು ಹೊರತುಪಡಿಸಿ ಉಳಿದ ನಗರಗಳಲ್ಲಿ ಅಕ್ರಮ -ಸಕ್ರಮ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ ಎಂದು ಹೇಳಲಾಗಿದೆ.