alex Certify ಅಕ್ರಮ –ಸಕ್ರಮ, ರಾಜ್ಯಾದ್ಯಂತ ‘ಬಿ’ ಖಾತೆ ಆಸ್ತಿಗಳ ಸಕ್ರಮಗೊಳಿಸುವ ಗುರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ –ಸಕ್ರಮ, ರಾಜ್ಯಾದ್ಯಂತ ‘ಬಿ’ ಖಾತೆ ಆಸ್ತಿಗಳ ಸಕ್ರಮಗೊಳಿಸುವ ಗುರಿ

ಬೆಳಗಾವಿ(ಸುವರ್ಣಸೌಧ): ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಪರಿಷತ್‍ನಲ್ಲಿ ಸದಸ್ಯ ಎನ್.ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ ಅವರು ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲೊಂದು ದೂರು ದಾಖಲಾಗಿದೆ. ಈ ದೂರು ದಾಖಲಾಗಿದ್ದರಿಂದ ಅಕ್ರಮ-ಸಕ್ರಮ ಸಂಪೂರ್ಣ ಸ್ಥಗಿತವಾಗಿದೆ. ಅದನ್ನು ಇತ್ಯರ್ಥಗೊಳಿಸುವಲ್ಲಿ ರಾಜ್ಯ ಸರಕಾರ ತುಂಬಾ ಗಂಭೀರ ಪ್ರಯತ್ನ ನಡೆಸಿದೆ ಮತ್ತು ದೂರುದಾರರ ಬೇಡಿಕೆಗಳನ್ನು ಆಲಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಬೆಂಗಳೂರು ದಿನೇದಿನೇ ಬೆಳೆಯುತ್ತಿದ್ದು,ಜನದಟ್ಟಣೆ ಹೆಚ್ಚಾಗ್ತಾ ಇದೆ ಮತ್ತು 110 ಹಳ್ಳಿಗಳನ್ನು ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡಿದ್ದೇವೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ 8 ಮುನ್ಸಿಪಾಲಿಟಿಗಳನ್ನು ಸೇರಿಸಿಕೊಳ್ಳಲಾಗಿತ್ತು. ನಗರ ಪ್ರದೇಶದ ಜೊತೆಗೆ ಹಳ್ಳಿಗಳಲ್ಲಿಯೂ ಮೂಲಸೌಕರ್ಯ ಕಲ್ಪಿಸುವ ಸವಾಲು ಇದೆ;ಅಲ್ಲಿಯೂ ಸೌಕರ್ಯ ಒದಗಿಸಲಾಗುವುದು ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 18,52,802 ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಿವಿಧ ರೀತಿಯ ಉಪಯೋಗದ ಕಟ್ಟಡಗಳನ್ನ ವಿವಿಧ ವರ್ಗಗಳಾಗಿ ವಿಂಗಡಿಸಲಾಗಿದ್ದು,ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ದರಗಳಲ್ಲಿ ಆಸ್ತಿ ತೆರಿಗೆ ನಿಗದಿಪಡಿಸಲಾಗಿದೆ. ವಾಣಿಜ್ಯ ಕಟ್ಟಡಗಳಿಗೆ ಯೂನಿಟ್ ಏರಿಯಾ ವ್ಯಾಲ್ಯೂ ಮೌಲ್ಯದ ಶೇ.25ರಷ್ಟು ತೆರಿಗೆ ಹಾಗೂ ವಸತಿ ಕಟ್ಟಡಗಳಿಗೆ ಶೇ.20ರಷ್ಟು ತೆರಿಗೆ ವಿಧಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...