ಬೆಂಗಳೂರು: ನಮೂನೆ 53 ಹಾಗೂ 57ನೇ ನಮೂನೆಯಲ್ಲಿ ಸಲ್ಲಿಸಿದ ಅಕ್ರಮ-ಸಕ್ರಮ ಅರ್ಜಿಗಳನ್ನು ಇತ್ಯರ್ಥಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಅಕ್ರಮ-ಸಕ್ರಮಕ್ಕೆ ಕಾನೂನು ತಿದ್ದುಪಡಿ ಮಾಡುವ ಬಗ್ಗೆ ಸಿಎಂ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಗೋಮಾಳ, ಬಗರ್ ಹುಕುಂ ಜಮೀನು ವ್ಯಾಜ್ಯಗಳಿಗೆ ಪರಿಹಾರ ನೀಡಬೇಕು. ನಮೂನೆ 53 ಮತ್ತು 57ರಲ್ಲಿ ಅರ್ಜಿ ಸಲ್ಲಿಸಿದ ಅಕ್ರಮ ಗೋಮಾಳ ಮತ್ತು ಬಗರ್ ಹುಕುಂ ಸಾಗುವಳಿದಾರರ ಜಮೀನುಗಳನ್ನು ಸಕ್ರಮಗೊಳಿಸಲು ಅಗತ್ಯ ಕಾನೂನು ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.
ಇದರ ಬಗ್ಗೆ ಕಾನೂನು ಇಲಾಖೆಯೊಂದಿಗೆ ಸಭೆ ನಡೆಸಿ ಅಂತಿಮ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.