ಬೆಂಗಳೂರು: ಅಕ್ರಮ-ಸಕ್ರಮ ಯೋಜನೆಯಡಿ 15 ಲಕ್ಷ ಜನರಿಗೆ ನೆಮ್ಮದಿ ನೀಡಲು ಸರ್ಕಾರ ಮುಂದಾಗಿದೆ. ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ತೆರಿವಿಗೆ ಸರ್ಕಾರ ಪ್ರಯತ್ನ ನಡೆಸಿದೆ. ಪ್ರಕರಣ ಇತ್ಯರ್ಥಕ್ಕೆ ವಾರದೊಳಗೆ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಲು ಮುಂದಾಗಿದೆ.
ವಿಧಾನಪರಿಷತ್ತಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದು, ಸರ್ಕಾರಿ ಜಾಗ, ಹೊಲ ಜಮೀನುಗಳಲ್ಲಿ ಜನ ಮನೆ ನಿರ್ಮಿಸಿಕೊಂಡಿದ್ದಾರೆ. ಅಕ್ರಮ ಸಕ್ರಮ ಯೋಜನೆಯಿಂದ ಸುಮಾರು 15 ಲಕ್ಷ ಜನರಿಗೆ ಅನುಕೂಲವಾಗಲಿದ್ದು, ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯ ಬರಲಿದೆ ಎಂದು ಹೇಳಿದ್ದಾರೆ.
ಕೃಷಿ ಭೂಮಿಯಲ್ಲಿ ಬಡಾವಣೆ ನಿರ್ಮಿಸಲಾಗಿದ್ದು ಇಂತಹ ಅನಧಿಕೃತ ಕಂದಾಯ ನಿವೇಶನ ನೋಂದಣಿ ಸಾಧ್ಯವಾಗುತ್ತಿಲ್ಲ ಎಂದ ಅವರು, ಪ್ರತಿ ಗ್ರಾಮದಲ್ಲಿಯೂ ಶವಸಂಸ್ಕಾರಕ್ಕೆ ಭೂಮಿ ಕಾಯ್ದಿರಿಸಲಾಗುವುದು. ಸರ್ಕಾರಿ ಜಮೀನು ಇಲ್ಲದ ಕಡೆ ಖಾಸಗಿಯವರಿಂದ ಜಮೀನು ಖರೀದಿಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.