ಇಂದು ಬಿಡುಗಡೆಯಾಗಲಿರುವ ಬಾಲಿವುಡ್ ನ ಖ್ಯಾತ ನಟ ಅಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಚಿತ್ರಕ್ಕೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೆರಿಗೆ ವಿನಾಯ್ತಿ ಘೋಷಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಚಿತ್ರದ ಪ್ರೀಮಿಯರ್ ಶೋ ಏರ್ಪಡಿಸಲಾಗಿತ್ತು. ಚಿತ್ರ ವೀಕ್ಷಿಸಿದ ಅವರು ಅಕ್ಷಯ್ ಕುಮಾರ್ ನಟನೆಗೆ ಮತ್ತು ಚಿತ್ರದ ಬಗ್ಗೆ ಶಹಬ್ಬಾಸ್ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರೂ ಸಹ ಚಿತ್ರವನ್ನು ವೀಕ್ಷಿಸಿದ್ದು, ತಮ್ಮ ರಾಜ್ಯದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವುದಾಗಿ ಘೋಷಿಸಿದ್ದಾರೆ.
ಈ ಚಿತ್ರದಲ್ಲಿ ಭಾರತದ ಶ್ರೀಮಂತ ಸಂಸ್ಕೃತಿಯನ್ನು ತೋರಿಸಲಾಗಿದೆ. ವಿಶೇಷವಾಗಿ ಅಕ್ಷಯ್ ಕುಮಾರ್ ಅವರು ತಮ್ಮ ನಟನೆಯ ಮೂಲಕ ದೇಶದ ಇತಿಹಾಸದ ಸೊಬಗನ್ನು ತೋರಿಸಿದ್ದಾರೆ. ಇದಕ್ಕಾಗಿ ನಾನು ಅಕ್ಷಯ್ ಕುಮಾರ್ ಮತ್ತು ಇಡೀ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ನಮ್ಮ ರಾಜ್ಯದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡಲಾಗುವುದು ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.