ವಿಜಯಪುರ: ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕು ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಆಲಮಟ್ಟಿ ಅಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಬಾಗಿನ ಅರ್ಪಿಸಲಿದ್ದಾರೆ.
ಬುಧವಾರ ಮಧ್ಯಾಹ್ನ 1 ಗಂಟೆಗೆ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ಮತ್ತು ಬಾಗಿನ ಅರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಸಚಿವರಾದ ಶಿವಾನಂದ ಪಾಟೀಲ, ಎಂ.ಬಿ. ಪಾಟೀಲ, ಆರ್.ಬಿ. ತಿಮ್ಮಾಪುರ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.
ಉತ್ತರ ಕರ್ನಾಟಕ ಭಾಗದ ಜೀವನಾಡಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹರಿದು ಆಲಮಟ್ಟಿ ಅಣೆಕಟ್ಟು ಗರಿಷ್ಠ ಮಟ್ಟ 519.60 ಮೀಟರ್ ತಲುಪಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ವತಿಯಿಂದ ಕೃಷ್ಣಾ ನದಿಗೆ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಆಲಮಟ್ಟಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ.