alex Certify ತುಂಬಿದ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಂಬಿದ ಆಲಮಟ್ಟಿ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಆಗಮಿಸಲಿದ್ದು, ತುಂಬಿದ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಜಿಂದಾಲ್ ಏರ್ ಸ್ಟ್ರಿಪ್ ಗೆ ಆಗಮಿಸಲಿರುವ ಸಿಎಂ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಹೊರಟು 11:45ಕ್ಕೆ ಆಲಮಟ್ಟಿಗೆ ಆಗಮಿಸಲಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಆಗಮಿಸಲಿರುವ ಅವರು ಕೃಷ್ಣಾ ನದಿಗೆ ಗಂಗಾ ಪೂಜೆ ನೆರವೇರಿಸಿ, ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ಕ್ಕೆ ಸಂಬಂಧಿಸಿದಂತೆ ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣದ ಕುರಿತು ಸಭೆ ನಡೆಸಲಿದ್ದಾರೆ. ಸಚಿವ ಎಂ.ಬಿ. ಪಾಟೀಲ ಸೇರಿ ಹಲವರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಆಲಮಟ್ಟಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...