ಬೆಂಗಳೂರು : ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಬೆಂಗಳೂರು ನಂಬರ್ 1 ಸ್ಥಾನದಲ್ಲಿದೆ ಎಂಬ ಆತಂಕಕಾರಿ ಮಾಹಿತಿಯೊಂದನ್ನು ಎನ್ ಸಿಬಿ ಬಹಿರಂಗಪಡಿಸಿದೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ 2022ರಲ್ಲಿ ನಡೆದ ಆ್ಯಸಿಡ್ ದಾಳಿಗಳ ಕುರಿತು ವರದಿಯನ್ನು ಬಹಿರಂಗಪಡಿಸಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ 8 ಮಹಿಳೆಯರ ಮೇಲೆ ಆಸಿಡ್ ದಾಳಿ ಮಾಡಲಾಗಿದೆ. 2022ರಲ್ಲಿ ದೆಹಲಿಯಲ್ಲಿ 7 ಮಹಿಳೆಯರು ಆಸಿಡ್ ದಾಳಿಗೆ ಬಲಿಯಾಗಿದ್ದು, ಎರಡನೇ ಸ್ಥಾನದಲ್ಲಿದೆ. ನಂತರ ಅಹಮದಾಬಾದ್ ಮೂರನೇ ಸ್ಥಾನದಲ್ಲಿದ್ದು, ಅಲ್ಲಿ 5 ಪ್ರಕರಣಗಳು ದಾಖಲಾಗಿವೆ ಎಂದು ಎನ್ಸಿಆರ್ಬಿ ಬಿಡುಗಡೆ ಮಾಡಿದ ಅಂಕಿ-ಅಂಶಗಳು ಬಹಿರಂಗಪಡಿಸಿದೆ. . ಕಳೆದ ವರ್ಷ ಕೆಲಸಕ್ಕೆ ಹೋಗುತ್ತಿದ್ದ 24 ವರ್ಷದ ಎಂ.ಕಾಂ ಪದವೀಧರ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿತ್ತು. ಇದು ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿತ್ತು.
ಹೈದರಾಬಾದ್ ಮತ್ತು ಅಹಮದಾಬಾದ್ನಂತಹ ಮೆಟ್ರೋಪಾಲಿಟನ್ ನಗರಗಳು 2022 ರಲ್ಲಿ ಎರಡು ಆಸಿಡ್ ದಾಳಿ ಯತ್ನ ಪ್ರಕರಣಗಳನ್ನು ದಾಖಲಿಸಿವೆ.