ಬೆಂಗಳೂರು : ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದ್ದು, ಭ್ರೂಣ ಪತ್ತೆ ಮಾಡಿದ್ರೆ 5 ವರ್ಷ ಜೈಲು, 50 ಸಾವಿರ ದಂಡ ವಿಧಿಸಲಾಗುತ್ತದೆ.
ವೈದ್ಯರು ಭ್ರೂಣ ಲಿಂಗ ಪತ್ತೆ ಮಾಡಿದ್ದಲ್ಲಿ ಅವರಿಗೆ ಮೊದಲನೆ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲು ಶಿಕ್ಷೆಯ ಜೊತೆಗೆ ₹10,000 ದವರೆಗೆ ದಂಡ ವಿಧಿಸಲಾಗುವುದು. ಜೊತೆಗೆ ವೈದ್ಯಕೀಯ ವೃತ್ತಿ ಮಾಡದಂತೆ ರಾಜ್ಯ ವೈದ್ಯಕೀಯ ಮಂಡಳಿಯಿಂದ ಅವರ ಹೆಸರನ್ನು ಐದು ವರ್ಷಗಳವರೆಗೆ ತೆಗೆದು ಹಾಕಲಾಗುವುದು.
ಇದೇ ಅಪರಾಧ ಮತ್ತೊಮ್ಮೆ ಮಾಡಿದ್ದಲ್ಲಿ 5 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ₹50,000 ದವರೆಗೆ ದಂಡ ವಿಧಿಸಲಾಗುವುದು. ಅಲ್ಲದೇ, ಶಾಶ್ವತವಾಗಿ ಅವರ ಹೆಸರನ್ನು ರಾಜ್ಯ ವೈದ್ಯಕೀಯ ಮಂಡಳಿಯಿಂದ ತೆಗೆದು ಹಾಕಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.