alex Certify ಆರ್ಥಿಕ ನೆರವು ಪಡೆದು ‘ಕೌಶಲ್ಯ ತರಬೇತಿ’ ನೀಡದ 8 ಕಂಪೆನಿಗಳ ವಿರುದ್ಧ ಕ್ರಿಮಿನಲ್ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಥಿಕ ನೆರವು ಪಡೆದು ‘ಕೌಶಲ್ಯ ತರಬೇತಿ’ ನೀಡದ 8 ಕಂಪೆನಿಗಳ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು : ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದು ಅಭ್ಯರ್ಥಿಗಳಿಗೆ ತರಬೇತಿ ನೀಡದ 8 ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ಪಡೆದು ಅಭ್ಯರ್ಥಿಗಳಿಗೆ ತರಬೇತಿ ನೀಡದ 8 ಕಂಪನಿಗಳ ವಿರುದ್ಧ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಹಾಗೂ ₹ 74.65 ಕೋಟಿ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡುವಂತೆ ಜೀವನೋಪಾಯ ಹಾಗೂ ಕೌಶಲ್ಯಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಡಿಪ್ಲೊಮಾ, ಐಐಟಿ ಸೇರಿದಂತೆ ಮತ್ತಿತರ ವೃತ್ತಿಪರ ಕೋರ್ಸ್ಗಳಿಗೆ ತರಬೇತಿ ನೀಡಲು ಒಪ್ಪಂದ ಮಾಡಿಕೊಂಡು ನಿಯಮ ಉಲ್ಲಂಘನೆ ಮಾಡಿರುವ 8 ಕಂಪೆನಿಗಳ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬೇಕು. ಜೊತೆಗೆ ತಕ್ಷಣದಿಂದಲೇ ಅನ್ವಯವಾಗುವಂತೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಿ, ಮುಂದೆ ಇಂತಹ ಏಜೆನ್ಸಿಗಳಿಗೆ ತರಬೇತಿ ನೀಡುವ ಟೆಂಡರ್ ಗಳನ್ನು ನೀಡಬಾರದು ಎಂದು ಸೂಚನೆ ನೀಡಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...