ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಇವತ್ತು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮಳೆಯಾಗುತ್ತಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.