alex Certify ALERT : ‘ಝಿಕಾ ವೈರಸ್’ ಸೋಂಕಿನ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ‘ಝಿಕಾ ವೈರಸ್’ ಸೋಂಕಿನ ಲಕ್ಷಣ, ಮುನ್ನೆಚ್ಚರಿಕೆ ಕ್ರಮಗಳೇನು ತಿಳಿಯಿರಿ

ಬೆಂಗಳೂರು : ಚಿಕ್ಕಬಳ್ಳಾಪುರದಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಡೆಂಗ್ಯೂ, ಚಿಕೂನ್ ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು, ಜಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ.

ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸ್ವಚ್ಚ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣಗಳು.

ಜಿಕಾ ವೈರಸ್ ಸೋಂಕಿನ ಲಕ್ಷಣಗಳು:

ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ.

ಬಹುತೇಕ ಜಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ.

ಕೀಲುಗಳಲ್ಲಿ ನೋವು
ಸ್ನಾಯುಗಳಲ್ಲಿ ನೋವು
ಗರ್ಭಾವಸ್ಥೆಯಲ್ಲಿ ಜಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೋಸೆಫಾಲಿ ) ಬೆಳವಣಿಗೆ ದೋಷ ಕಂಡು ಬರಬಹುದು.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...