alex Certify ALERT : ವಾಹನ ಸವಾರರೇ ಎಚ್ಚರ ; ನಾಳೆಯಿಂದ ಈ ನಿಯಮಗಳನ್ನು ಉಲ್ಲಂಘಿಸಿದ್ರೆ ದಂಡ, ಜೈಲು ಶಿಕ್ಷೆ ಫಿಕ್ಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ವಾಹನ ಸವಾರರೇ ಎಚ್ಚರ ; ನಾಳೆಯಿಂದ ಈ ನಿಯಮಗಳನ್ನು ಉಲ್ಲಂಘಿಸಿದ್ರೆ ದಂಡ, ಜೈಲು ಶಿಕ್ಷೆ ಫಿಕ್ಸ್..!

ಬೆಂಗಳೂರು : ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಇದು ಆಗಸ್ಟ್ 1 ನಾಳೆಯಿಂದ ಜಾರಿಗೆ ಬರಲಿದೆ.

ಹೌದು. ..! ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕಣ್ಣು ಕುಕ್ಕುವ ಹೆಡ್ ಲೈಟ್ ಅಳವಡಿಸಬೇಡಿ..!

ವಾಹನಗಳಲ್ಲಿ ಪ್ರಖರ ಬೆಳಕಿನ ಹೆಡ್ಲೈಟ್ಗಳನ್ನು ಅಳವಡಿಸುವುದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನಗಳಿಗೆ ರಸ್ತೆ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಣ್ಣುಕುಕ್ಕುವ ಹೆಡ್ಲೈಟ್ಗಳನ್ನು ವಾಹನಗಳಿಗೆ ಅಳವಡಿಸಬೇಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ಕೈಗೊಂಡ ಪೊಲೀಸರು ರಾಜ್ಯಾದ್ಯಂತ 8 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಣ್ಣುಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು 8 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಎಲ್ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ಚಾಲಕರ ವಿರುದ್ಧ ಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...