alex Certify ALERT : ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ.

2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ.ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ. ನಂಬರ್ ಪ್ಲೇಟ್ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ.

ಎಚ್ಎಸ್ಆರ್ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ವಾಹನದ ಇಂಜಿನ್ ಸಂಖ್ಯೆ, ಚಾಸ್ಸಿ ನಂಬರ್, ರಿಜಿಸ್ಟ್ರೇಷನ್ ನಂಬರ್, ಇನ್ಶೂರೆನ್ಸ್, ಮಾಲೀಕರ ಮಾಹಿತಿ ಹಾಗೂ ಪ್ರತ್ಯೇಕ ಗುರುತಿಸಿನ ಸಂಖ್ಯೆ ಹೊಂದಿರುತ್ತದೆ . ಅಶೋಕ ಚಕ್ರ ಚಿಹ್ನೆಯ ಕ್ರೋಮಿಯಂ ಸ್ಟಿಕ್ಕರ್ ಕೂಡ ಹೊಂದಿರುತ್ತದೆ.

2019ರ ಏಪ್ರಿಲ್ ಕ್ಕಿಂತ ಮೊದಲು ನೋಂದಣಿ ಮಾಡಿಸಿಕೊಂಡ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಲಘು ಮೋಟಾರು ವಾಹನ, ಮಧ್ಯಮ ಮತ್ತು ಬಾರಿ ವಾಣಿಜ್ಯ ವಾಹನಗಳು, ಟ್ರ್ಯಾಕ್ಟರ್, ಪ್ರಯಾಣಿಕರ ಕಾರು ಸೇರಿ ಎಲ್ಲ ಹಳೆಯ ವಾಹನಗಳಿಗೆ ಈ ನಿಯಮ ಅನ್ವಯವಾಗಲಿದೆ. ವಾಹನ ಮಾಲಿಕರು ಆನ್ಲೈನ್ ವೆಬ್ಸೈಟ್ ಗೆ ಭೇಟಿ ನೀಡಿ ನೊಂದಾಯಿಸಿ ಆನ್ ಲೈನ್ ಮೂಲಕವೇ ಹೆಚ್.ಎಸ್.ಆರ್.ಪಿ ಶುಲ್ಕವನ್ನು ಪಾವತಿಸಿ ನಂತರ ವಾಹನ ಡೀಲರ್ ಬಳಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...