alex Certify ALERT : ಮಕ್ಕಳ ಕೈಗೆ ‘ಮೊಬೈಲ್’ ಕೊಡುವ ಪೋಷಕರು ಇತ್ತ ಗಮನಿಸಿ..! ಸರ್ಕಾರದಿಂದ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಮಕ್ಕಳ ಕೈಗೆ ‘ಮೊಬೈಲ್’ ಕೊಡುವ ಪೋಷಕರು ಇತ್ತ ಗಮನಿಸಿ..! ಸರ್ಕಾರದಿಂದ ಮಹತ್ವದ ಸೂಚನೆ

ಬೆಂಗಳೂರು : ವಿಧಾನಸೌಧದಲ್ಲಿ ಸೈಬರ್ ಅಪರಾಧ ನಿಯಂತ್ರಣ ಮತ್ತು ಸೈಬರ್ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮಾತನಾಡಿದರು.

18 ವರ್ಷದ ಒಳಗಿನ ಮಕ್ಕಳ ರಕ್ಷಣೆ, ತಂತ್ರಜ್ಞಾನ ಮತ್ತು ಜಾಲತಾಣಗಳಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ಪರಿಣಾಮಗಳು, ಅಹಿತಕರ ಚಟುವಟಿಕೆಗಳಲ್ಲಿ ಕಾನೂನಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಮಕ್ಕಳು ತಮಗೆ ಅರಿಯದೆ .

ಭಾಗಿಯಾಗುತ್ತಿರುವುದನ್ನು ನಿಯಂತ್ರಿಸುವುದು ಅತ್ಯಗತ್ಯವಾಗಿದೆ. ಎನ್ಸಿಆರ್ಬಿ ಮತ್ತು ಎಸ್ಸಿಆರ್ಬಿ ವರದಿಗಳಲ್ಲಿ ಮಕ್ಕಳ ವಿರುದ್ದ ನಡೆಯುತ್ತಿರುವ ಸೈಬರ್ ಅಪರಾಧಗಳ ಪ್ರಮಾಣವನ್ನು ಅವಲೋಕಿಸಿ ನಿಯಂತ್ರಿಸುವ ಕಾರ್ಯಗಳು ನಿರಂತರವಾಗಿ ಹಾಗೂ ಪರಿಣಾಮಕಾರಿಯಾಗಿ ಮುಂದುವರೆಯಬೇಕು ಎಂದು ತಿಳಿಸಿದರು.

ಕರ್ನಾಟಕ ಸೈಬರ್ ಭದ್ರತಾ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಿರುವ ನೆರವು ಹಾಗೂ ಮಾನವ ಸಂಪನ್ಮೂಲ ಒದಗಿಸಲು ಸರ್ಕಾರ ಸಿದ್ದವಿದೆ. ಗೂಗಲ್, ಮೆಟಾ, ಫೇಸ್ಬುಕ್, ಮೈಕ್ರೋಸಾಫ್ಟ್, ಯುಟ್ಯೂಬ್ ಮತ್ತಿತರ ಕಂಪನಿಗಳ ಜೊತೆ ಸಮನ್ವಯ ಸಾಧಿಸಿ ಮಕ್ಕಳಿಗೆ ಸಂಬಂಧಿಸಿದ ಸಿಎಸ್ಎಎಂ ಸಾಮಾಗ್ರಿಗಳನ್ನು ಗುರುತಿಸಿ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗುವುದು. ಸೈಬರ್ ವಂಚನೆಗೆ ಒಳಗಾದ ಮಕ್ಕಳಿಗೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಸಹಯೋಗದಲ್ಲಿ ಪುನರ್ವಸತಿಗೆ ಕ್ರಮ ವಹಿಸಬೇಕು.
ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಪಾಲಕರು ನಿರ್ಲಕ್ಷ್ಯ ತೋರಬಾರದು. ಸೈಬರ್ ಅಪರಾಧ ಪತ್ತೆ ಘಟಕಗಳು ಹಾಗೂ ಬ್ಯಾಂಕಿಂಗ್ ವಲಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಹಣಕಾಸು ವಂಚನೆಗಳನ್ನು ತ್ವರಿತವಾಗಿ ಪತ್ತೆ ಮಾಡಿ ತಪ್ಪಿತಸ್ಥರನ್ನು ಶಿಕ್ಷಿಸುವ ಕಾರ್ಯಗಳಾಬೇಕು. ಶಾಲಾ ಹಂತದಲ್ಲಿ ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಡಿಜಿಟಲ್ ಭದ್ರತೆ ಕುರಿತು ಅರಿವು ಮೂಡಿಸುವ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯ ಕಾರ್ಯದರ್ಶಿಗಳು ಸೂಚಿಸಿದರು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...