![](https://kannadadunia.com/wp-content/uploads/2019/12/bpl-card-jpg_710x400xt.jpg)
ಬೆಂಗಳೂರು : ಸರ್ಕಾರದ ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗುತ್ತದೆ. ಇದೀಗ ಆಹಾರ ಇಲಾಖೆಯು ಆರು ತಿಂಗಳಿನಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ.
6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದು. ರಾಜ್ಯಾದ್ಯಂತ ಒಟ್ಟು 3.26 ಲಕ್ಷ ರೇಷನ್ ಕಾರ್ಡ್ ರದ್ದಾಗಲಿದೆ ಎಂದು ತಿಳಿದು ಬಂದಿದೆ. ಯಾರು ಪಡಿತರವನ್ನು ಪಡೆದುಕೊಳ್ಳುತ್ತಿಲ್ಲವೋ ಅಂಥವರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ಇತರ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಪಡಿತರ ಚೀಟಿಗಳನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ.
ರಾಜ್ಯಾದ್ಯಂತ 3.26 ಲಕ್ಷ ಬಿಪಿಎಲ್ ಕಾರ್ಡ್ದಾರರು ಆರು ತಿಂಗಳಿಂದ ರೇಷನ್ ಪಡೆಯುತ್ತಿಲ್ಲ. ಆಸ್ಪತ್ರೆಗಳಲ್ಲಿ ಚಿಕಿತ್ಸೆ, ಪಿಂಚಣಿ ಹಾಗೂ ಆರ್‌ಟಿಇ ಅಡಿ ಶಿಕ್ಷಣ ಸೇರಿ ಹಲವು ಸರ್ಕಾರಿ ಸೌಕರ್ಯ , ಪಡೆದುಕೊಳ್ಳುವ ನಿಟ್ಟಿನಲ್ಲಿ ಲಕ್ಷಾಂತರ ಮಂದಿ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಆದರೂ ಕೆಲವರು ಆರು ತಿಂಗಳಿನಿಂದ ರೇಷನ್ ಪಡೆದಿಲ್ಲ ಎಂದು ಆಹಾರ ಇಲಾಖೆ ಮೂಲಗಳು ತಿಳಿಸಿವೆ.