alex Certify Watch Video: ಬೆಚ್ಚಿ ಬೀಳಿಸುವಂತಿದೆ ಈ ಅಪಘಾತ; ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದೇ ‘ಪವಾಡ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Watch Video: ಬೆಚ್ಚಿ ಬೀಳಿಸುವಂತಿದೆ ಈ ಅಪಘಾತ; ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದೇ ‘ಪವಾಡ’

ಭಾನುವಾರ ನಡೆದ ಬ್ರಿಟಿಷ್ ಗ್ರಾಂಡ್ ಫ್ರಿಕ್ಸ್ ಫಾರ್ಮುಲಾ ರೇಸ್ನಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಇದರಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವುದೇ ದೊಡ್ಡ ಪವಾಡವಾಗಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಈ ರೇಸ್ ನಲ್ಲಿ ಸಾಗುತ್ತಿದ್ದ Zhou Guanyu ಅವರಿದ್ದ ಕಾರು ನಿಯಂತ್ರಣ ತಪ್ಪಿ ಏಕಾಏಕಿ ಐದಾರು ಪಲ್ಟಿಯಾಗಿದೆ. ಅಷ್ಟೇ ಅಲ್ಲ ಅಪಘಾತದ ತೀವ್ರತೆಗೆ ಕಾರಿನಲ್ಲಿ ಬೆಂಕಿಯೂ ಕಾಣಿಸಿಕೊಂಡಿದೆ. ಈ ಅಪಘಾತದಲ್ಲಿ ಅಕ್ಕಪಕ್ಕದಲ್ಲಿದ್ದ ಇತರೆ ವಾಹನಗಳಿಗೂ ಜಖಂ ಆಗಿದೆ.

ಆದರೆ ಅಚ್ಚರಿ ಎಂಬಂತೆ ಚಾಲಕ Zhou Guanyu ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೆ ಇವರ ಅಕ್ಕಪಕ್ಕದಲ್ಲಿದ್ದ ಇತರೆ ಕಾರುಗಳ ಚಾಲಕರಿಗೂ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಆದರೂ ಮುಂಜಾಗ್ರತಾ ಕ್ರಮವಾಗಿ Zhou Guanyu ಅವರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದ್ದು, ಯಾವುದೇ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...