alex Certify ಎಲ್ಲಾ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಕಡ್ಡಾಯವಾಗಿ ಕಚೇರಿಗೆ ಹಾಜರಾಗಲು ಸಿಬ್ಬಂದಿ ಸಚಿವಾಲಯದಿಂದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಕಡ್ಡಾಯವಾಗಿ ಕಚೇರಿಗೆ ಹಾಜರಾಗಲು ಸಿಬ್ಬಂದಿ ಸಚಿವಾಲಯದಿಂದ ಸೂಚನೆ

ನವದೆಹಲಿ: ಸಿಬ್ಬಂದಿ ಸಚಿವಾಲಯದ ಆದೇಶದ ಪ್ರಕಾರ ಎಲ್ಲಾ ಕೇಂದ್ರ ಸರ್ಕಾರಿ ನೌಕರರು ಕೆಲಸದ ದಿನಗಳಲ್ಲಿ ಕಚೇರಿಗೆ ಹಾಜರಾಗುವಂತೆ ತಿಳಿಸಲಾಗಿದೆ.

ಕೊರೊನಾ ಸೋಂಕು ಹೆಚ್ಚಾಗಿದ್ದ ಸಂದರ್ಭದಲ್ಲಿ ನೌಕರರು ಕಚೇರಿಗೆ ಹಾಜರಾಗಲು ವಿನಾಯಿತಿ ನೀಡಲಾಗಿತ್ತು. ಈಗ ಕಚೇರಿಯ ಕೆಲಸದ ದಿನಗಳಲ್ಲಿ ಎಲ್ಲಾ ನೌಕರರು ಹಾಜರಾಗಲು ತಿಳಿಸಲಾಗಿದೆ. ಹೀಗಿದ್ದರೂ, ಕಂಟೈನ್ಮೆಂಟ್ ವಲಯದಲ್ಲಿ ವಾಸಿಸುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ವಲಯವನ್ನು ಕಂಟೈನ್ಮೆಂಟ್ ಜೋನ್ ಡಿನೋಟಿಫೈ ಮಾಡುವವರೆಗೆ ಕಚೇರಿಗೆ ಬರಲು ವಿನಾಯಿತಿ ಇರುತ್ತದೆ ಎಂದು ಹೇಳಲಾಗಿದೆ.

ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳು ಹೆಚ್ಚಾಗಿದ್ದ ಸಂದರ್ಭದಲ್ಲಿ ನೌಕರರ ಕಚೇರಿ ಕೆಲಸ ನಿರ್ವಹಣೆಗೆ ವಿನಾಯಿತಿ ನೀಡಲಾಗಿತ್ತು. ಕಚೇರಿ ಕೆಲಸದ ಸ್ಥಳದಲ್ಲಿ ಹೆಚ್ಚಿನ ಜನಸಂದಣಿ ಮತ್ತು ಅಧಿಕಾರಿಗಳು ಸಿಬ್ಬಂದಿ ಸೇರದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಎಲ್ಲಾ ಹಂತದ ಸರ್ಕಾರಿ ನೌಕರರು ಮತ್ತು ಉದ್ಯೋಗಿಗಳಿಗೆ ಯಾವುದೇ ವಿನಾಯಿತಿ ಇಲ್ಲದೆ ಕಚೇರಿ ಕೆಲಸದ ದಿನಗಳಲ್ಲಿ ಹಾಜರಾಗಬೇಕೆಂದು ತಿಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...