ಲಖನೌ: ಜನವರಿ 25 ರಂದು ಮುಹಮ್ಮದ್ ಹಜರತ್ ಅಲಿ ಅವರ ಜನ್ಮದಿನದ ಸಂದರ್ಭದಲ್ಲಿ ಉತ್ತರ ಪ್ರದೇಶ ಸರ್ಕಾರ ರಾಜ್ಯದಾದ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದೆ.
ನರ್ಸರಿಯಿಂದ 12ನೇ ತರಗತಿವರೆಗಿನ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಅನ್ವಯಿಸುತ್ತದೆ. ಇದಕ್ಕೂ ಮೊದಲು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪಟ್ಟಾಭಿಷೇಕ ಸಮಾರಂಭದ ಕಾರಣ ರಾಜ್ಯದ ಎಲ್ಲಾ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳಿಗೆ ಸರ್ಕಾರ ರಜೆ ನೀಡಿತ್ತು.
ಮುಹಮ್ಮದ್ ಹಜರತ್ ಅಲಿ ಅವರ ಜನ್ಮದಿನದ ಸ್ಮರಣಾರ್ಥ ಜನವರಿ 25, 2024 ರ ಗುರುವಾರದಂದು, ಪ್ರಿ-ನರ್ಸರಿಯಿಂದ 12 ನೇ ತರಗತಿಯವರೆಗೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲಾಗುವುದು. ಜನವರಿ 26ರಂದು ಗಣರಾಜ್ಯೋತ್ಸವ ಆಚರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಶಿಕ್ಷಣ ಇಲಾಖೆ ಮೂಲಕ ರಾಜ್ಯದ ಎಲ್ಲ ಶಾಲೆಗಳಿಗೆ ಈ ಸೂಚನೆ ರವಾನಿಸಲಾಗಿದೆ.