alex Certify ಗುಜರಾತ್ ಚುನಾವಣೆ; ಇಂದು ಮೋದಿ ಸೇರಿದಂತೆ ರಾಹುಲ್, ಕೇಜ್ರಿವಾಲ್‌ ರಿಂದ ಅಬ್ಬರದ ಪ್ರಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಜರಾತ್ ಚುನಾವಣೆ; ಇಂದು ಮೋದಿ ಸೇರಿದಂತೆ ರಾಹುಲ್, ಕೇಜ್ರಿವಾಲ್‌ ರಿಂದ ಅಬ್ಬರದ ಪ್ರಚಾರ

ಮುಂದಿನ ತಿಂಗಳು ನಡೆಯಲಿರುವ ಅಸೆಂಬ್ಲಿ ಚುನಾವಣೆಗೆ ಮುನ್ನ ಗುಜರಾತ್‌ನಲ್ಲಿ ಇಂದು ಹೈವೋಲ್ಟೇಜ್ ಪ್ರಚಾರ ನಡೆಯಲಿದೆ. ಪ್ರಮುಖ ಮೂರು ಪಕ್ಷಗಳ ಎಲ್ಲಾ ಪ್ರಮುಖ ನಾಯಕರು ರಾಜ್ಯದಾದ್ಯಂತ ಹಲವಾರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷದ ಬಿಜೆಪಿಯ ಮೂರು ಬ್ಯಾಕ್ ಟು ಬ್ಯಾಕ್ ‘ವಿಜಯ್ ಸಂಕಲ್ಪ ಸಮ್ಮೇಳನ’ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಲ್ಕು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಬಿಜೆಪಿಯ ಸ್ಟಾರ್ ಪ್ರಚಾರಕರೂ ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿಯವರು ದಿನವಿಡೀ ಸುರೇಂದ್ರನಗರ, ಜಬುಸರ್ ಮತ್ತು ನವಸಾರಿಯಲ್ಲಿ ಪ್ರಚಾರ ನಡೆಸಲಿದ್ದು, ಅಮಿತ್ ಶಾ ಅವರು ದ್ವಾರಕಾ, ಸೋಮನಾಥ್, ಜುನಾಗಢ್ ಮತ್ತು ಕಛ್ ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಮಹಮದವಾಡ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ರೋಡ್ ಶೋಗಳಲ್ಲಿ ಭಾಗವಹಿಸುತ್ತಾರೆ ಮತ್ತು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುಜರಾತ್‌ನಲ್ಲಿ 27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದು ಈ ಬಾರಿ ಎಎಪಿ ನನಗೊಂದು ಅವಕಾಶ ಕೊಡಿ ಎಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿರುವ ಕಾಂಗ್ರೆಸ್ ನ ರಾಹುಲ್ ಗಾಂಧಿ ಗುಜರಾತ್ ಚುನಾವಣಾ ಪ್ರಚಾರಕ್ಕಿಳಿದಿದ್ದಾರೆ.

ಎರಡೂವರೆ ತಿಂಗಳಲ್ಲಿ ಗುಜರಾತ್‌ಗೆ ಎರಡನೇ ಭೇಟಿ ನೀಡಿದ ರಾಹುಲ್ ಗಾಂಧಿ, ಸೂರತ್ ಜಿಲ್ಲೆಯ ಮಹುವಾ ಮತ್ತು ರಾಜ್‌ಕೋಟ್ ನಗರದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರು ಅಮ್ರೇಲಿಯಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಮತ್ತು ಖಂಬಲಿಯಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರು ನಾಳೆ ಸೂರತ್‌ನಲ್ಲಿ ರೋಡ್‌ಶೋ ಮತ್ತು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

182 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...