
ಬೆಂಗಳೂರು: ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಅಬಕಾರಿ ಇಲಾಖೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಏಪ್ರಿಲ್ ನಲ್ಲಿ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದೆ. ಏಪ್ರಿಲ್ ನಲ್ಲಿ ಬರೋಬ್ಬರಿ 3.87 ಕೋಟಿ ಲೀಟರ್ ಬಿಯರ್ ಮಾರಾಟವಾಗಿದೆ.
ಬೇಸಿಗೆ ಬಿಸಿಲ ತಾಪಮಾನ ಮತ್ತು ಲೋಕಸಭೆ ಚುನಾವಣೆಯ ಕಾರಣದಿಂದಾಗಿ ಬಿಯರ್ ಮಾರಾಟದಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಯಾಗಿದೆ. ಒಂದೇ ತಿಂಗಳಿನಲ್ಲಿ ಬರೋಬ್ಬರಿ 48.72 ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದು, ಅಬಕಾರಿ ಇಲಾಖೆಯಲ್ಲಿ ಹೊಸ ದಾಖಲೆಯಾಗಿದೆ. ಅಬಕಾರಿ ಇಲಾಖೆಯಲ್ಲಿ ಒಂದೇ ತಿಂಗಳಲ್ಲಿ ಇಷ್ಟೊಂದು ಪ್ರಮಾಣದ ಬಿಯರ್ ಮಾರಾಟವಾಗಿದ್ದು ಇದೇ ಮೊದಲ ಬಾರಿಯಾಗಿದೆ.