ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಮಾಜಿ ಸಚಿವ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು , ಅವರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.
ದೂರು ಸ್ವೀಕರಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮೀ ‘’ರೇವಣ್ಣ ಆಗಲಿ ಯಾರೇ ಆಗಲಿ, ಯಾರೇ ಮಾಡಿದರೂ ತಪ್ಪು ತಪ್ಪೇ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದಿದೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ. ಹೆಚ್ ಎಂ ರೇವಣ್ಣಗೆ ಪತ್ರ ಬರೆದು ಪ್ರತಿಕ್ರಿಯೆ ಕೇಳುತ್ತೇವೆ ಎಂದರು.
ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವವರ ಮೇಲೆ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಈ ಘಟನೆ ನಡೆದಿದೆ. ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ನಂದಿನಿ ನಾಗರಾಜ್ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಬಳಿಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.