ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕೇಳಿ ಬರುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಸತ್ಯಾಸತ್ಯತೆ ತಿಳಿಯಲು, ಹಾಗೂ ಹೇಮಾ ಕಮಿಟಿ ಮಾದರಿಯಲ್ಲಿ ಸಮಿತಿ ರಚಿಸುವ ಕುರಿತಾಗಿ ಫಿಲಂ ಚೇಂಬರ್ ನಲ್ಲಿ ಮಹತ್ವದ ಸಭೆ ಆರಂಭವಾಗಿದೆ.
ಬೆಂಗಳೂರಿನ ಫಿಲಂ ಚೇಂಬರ್ ನಲ್ಲಿ ಸಭೆ ನಡೆಯುತ್ತಿದ್ದು, ಮಂಡಳಿಯ ಸದಸ್ಯರು ಸೇರಿ ಹಲವರು ಹಾಜರಿದ್ದಾರೆ.
ಸಭೆಯಲ್ಲಿ ಕೇರಳದ ಹೇಮಾ ಸಮಿತಿ ಮಾದರಿ ಸಮಿತಿ ರಚನೆ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ. ನಟಿ ಅನಿತಾ ಭಟ್, ನಟಿ ತಾರಾ, ಭಾವನಾ ರಾಮಣ್ಣ ಸೇರಿದಂತೆ ಹಲವರು ಹಾಜರಿದ್ದಾರೆ.