ಬೆಂಗಳೂರು : ಹೆಚ್ ಡಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ವರ್ಗಾವಣೆ ದಂಧೆಯಲ್ಲಿ ಅವರ ಮಕ್ಕಳು ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಆರೋಪಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೊಡಲಿ, ಆರೋಪ ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ನನ್ನ ಮಕ್ಕಳಿಂದ ಅಧಿಕಾರ ದುರ್ಬಳಕೆ ಆಗಿದ್ದರೇ ದಾಖಲೆ ನೀಡಿ. ಸಾಬೀತಾದರೇ ರಾಜಕೀಯ ನಿವೃತ್ತಿ ಘೋಷಿಸುವೆ ಎಂದಿದ್ದಾರೆ.
ಸಿದ್ದರಾಮಯ್ಯ ದಾಖಲೆ ಇಟ್ಟು ಮಾತನಾಡಿದ್ದನ್ನು ನಾನು ಯಾವತ್ತು ಕೂಡ ನೋಡಿಯೇ ಇಲ್ಲ. .ಸಿದ್ದರಾಮಯ್ಯ ಯಾವತ್ತಾದರೂ ದಾಖಲೆ ಬಿಡುಗಡೆ ಮಾಡಿದ್ರಾ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಯಾವ ರೀತಿ ನಡೆಯುತ್ತಿದೆ. ಸಾರಿಗೆ ಬಸ್ ನೌಕರ ವರ್ಗಾವಣೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೂ ಈವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ವರ್ಗಾವಣೆಗೆ ಬೇಸತ್ತು ಸಚಿವರ ವಿರುದ್ಧ ಆರೋಪ ಮಾಡಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ಆತ ಡೆತ್ ನೋಟ್ ಬರೆದಿಟ್ಟಿದ್ದಾನೆ. ಡೆತ್ ನೋಟ್ ಬರೆದಿಟ್ಟರೂ ಸಂಬಂಧ ಪಟ್ಟವರ ವಿರುದ್ಧ ಇನ್ನೂ ಎಫ್ ಐ ಆರ್ ದಾಖಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.