ಚಿಕ್ಕಮಗಳೂರು : ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿರುವ ಆರೋಪ ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಕೇಳಿಬಂದಿದೆ.
ಮೃತರನ್ನು ರಂಜಿತಾ (21) ಎಂದು ಗುರುತಿಸಲಾಗಿದೆ. ಗಂಡು ಮಗುವಿಗೆ ಜನ್ಮ ನೀಡಿದ್ದ ಈಕೆ ಹೊಟ್ಟೆ ನೋವಿನಿಂದ ನರಳಿ ನರಳಿ ಮೃತಪಟ್ಟಿದ್ದಾಳೆ ಎಂದು ಮೃತ ಮಹಿಳೆಯರ ಪೋಷಕರು ಆರೋಪಿಸಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ವಡೇರಹಳ್ಳಿ ಮೂಲದ ಯುವತಿ ಕಳೆದ 1 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಬಳಿಕ ಹೊಟ್ಟೆನೋವಿನಿಂದ ನರಳಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.