alex Certify ‘ವಿದ್ಯುತ್ ಕಳ್ಳತನ’ ಮುಚ್ಚಿಹಾಕಲು ‘HDK’ ಯಿಂದ ವರ್ಗಾವಣೆ ದಂಧೆ ಆರೋಪ: ಸಿಎಂ ಸಿದ್ದರಾಮಯ್ಯ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವಿದ್ಯುತ್ ಕಳ್ಳತನ’ ಮುಚ್ಚಿಹಾಕಲು ‘HDK’ ಯಿಂದ ವರ್ಗಾವಣೆ ದಂಧೆ ಆರೋಪ: ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ವಿದ್ಯುತ್ ಕಳ್ಳತನ ಮುಚ್ಚಿಹಾಕಲು ವರ್ಗಾವಣೆ ದಂಧೆ ಆರೋಪ ಮಾಡಲಾಗಿದೆ ಎಂದು ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡಿದ್ದು ತಪ್ಪು ಅಲ್ವಾ? ಇದನ್ನು ಮುಚ್ಚಿಕೊಳ್ಳಲು ಯತೀಂದ್ರ ವಿಡಿಯೋ ಮುಂದಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...