ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ದಂಧೆ ಆರೋಪ ಪ್ರತಿಧ್ವನಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
ಅಬಕಾರಿ ಇಲಾಖೆ ಡಿಸಿ, ಡಿವೈಎಸ್ಪಿ ಗಳಿಂದ ಹಣ ಪಡೆದು ಹಣ ಪಡೆದು ವರ್ಗಾವಣೆ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಹಣ ಹೊಂದಿಸಲು ಲಂಚ ಸ್ವೀಕರಿಸಿದ ಆರೋಪ ಮಾಡಲಾಗಿದೆ. ವರ್ಗಾವಣೆಯ ಹೆಸರಲ್ಲಿ ದಂಧೆ ನಡೆಸುತ್ತಿದ್ದಾರೆ. 18 ಕೋಟಿ ರೂಪಾಯಿ ಸ್ವೀಕರಿಸಿದ್ದಾರೆ ಎಂದು ಆರೋಪಿಸಿ ಇಡಿಗೆ ದೂರು ನೀಡಲಾಗಿದೆ.
18 ಕೋಟಿ ಹಣದಲ್ಲಿ 13 ಕೋಟಿ ರೂ. ಸಚಿವರಿಗೆ, ಉಳಿದ ಹಣ ಸಹಾಯಕ ಕಾರ್ಯದರ್ಶಿ ಸೇರಿ ಹಲವರು ಪಾಲಾಗಿದೆ. ಕೋಲಾರ ಅಬಕಾರಿ ಡಿಸಿ, ಬೆಂಗಳೂರು ದಕ್ಷಿಣ ಅಬಕಾರಿ ಡಿಸಿ ಅವರ ಖಾತೆಗೆ ಹಣ ತಲುಪಿದೆ. ಲಂಚದ ಹಣದಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ದೂರು ನೀಡಲಾಗಿದೆ. ಅಬಕಾರಿ ಸಚಿವರ ಲಂಚಾವತಾರಕ್ಕೆ ಸರ್ಕಾರ ಕುಮ್ಮಕ್ಕು ನೀಡುತ್ತಿದ್ದು, ಇಡಿಯಿಂದ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ನೀಡಿದ್ದಾರೆ.