alex Certify ಬೆಂಗಳೂರಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ದಾಳಿ ವೇಳೆ 20 ಬಾಲಕಿಯರು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಮಾನವ ಕಳ್ಳ ಸಾಗಣೆ ಆರೋಪ: ದಾಳಿ ವೇಳೆ 20 ಬಾಲಕಿಯರು ಪತ್ತೆ

ಬೆಂಗಳೂರು: ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾನವ ಕಳ್ಳ ಸಾಗಣೆ ಪ್ರಕರಣ ಬೆಳಕಿಗೆ ಬಂದಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಂಗೂನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಳಿಯ ವೇಳೆ 20 ಬಾಲಕಿಯರು ಪತ್ತೆಯಾಗಿದ್ದಾರೆ. ಅವರನ್ನು ಗಲ್ಫ್ ರಾಷ್ಟ್ರಗಳಿಗೆ ಸಾಗಿಸಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ.

20 ಮಕ್ಕಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದು, ದಾಳಿಯ ಸಂದರ್ಭದಲ್ಲಿ ಸಲ್ಮಾ ಎಂಬ ಮಹಿಳೆ ಮತ್ತು ಆಕೆಯ ಬಾಸ್ ಶಮೀರ್ ಗೂಂಡಾಗಳನ್ನು ಕರೆಸಿ ಬೆದರಿಸಲು ಮುಂದಾಗಿದ್ದಾರೆ. ಪೊಲೀಸರ ನೆರವಿನೊಂದಿಗೆ ಠಾಣೆಗೆ ಬರಲಾಗಿದ್ದು, ದೂರು ನೀಡಿ ತನಿಖೆಗೆ ಒತ್ತಾಯಿಸಲಾಗಿದೆ ಎಂದು ಪ್ರಿಯಾಂಕ್ ಕಂಗೂನ್ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಕಂಗೂನ್, ಇಂದು ಕರ್ನಾಟಕದ ಬೆಂಗಳೂರಿನಲ್ಲಿ ಅಕ್ರಮ ಅನಾಥಾಶ್ರಮದ ತಪಾಸಣೆ ವೇಳೆ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಇಲ್ಲಿ 20 ಹುಡುಗಿಯರಿದ್ದರು, ಅವರಲ್ಲಿ ಅನಾಥರು ಇದ್ದರು. ಹುಡುಗಿಯರನ್ನು ಶಾಲೆಗೆ ಕಳುಹಿಸುವುದಿಲ್ಲ, ಇಡೀ ಮಕ್ಕಳ ಮನೆಯಲ್ಲಿ ಕಿಟಕಿ ಅಥವಾ ಸ್ಕೈಲೈಟ್ ಇಲ್ಲ, ಹುಡುಗಿಯರನ್ನು ಸಂಪೂರ್ಣವಾಗಿ ಜೈಲಿನಲ್ಲಿರುವಮತೆ  ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಕ್ಕಳ ಮನೆಯನ್ನು ನೋಡಿಕೊಳ್ಳುವ ಸಲ್ಮಾ ಎಂಬ ಮಹಿಳೆ ಕುವೈತ್‌ನಲ್ಲಿರುವ ಹುಡುಗಿಯರ ಸಂಬಂಧಗಳನ್ನು ಏರ್ಪಡಿಸುತ್ತಾಳೆ ಎಂದು ಹುಡುಗಿಯರು ಹೇಳಿದರು. ಪ್ರಾಥಮಿಕ ಚರ್ಚೆಗಳಿಂದ, ಗಲ್ಫ್ ದೇಶಗಳಲ್ಲಿ, ಮದುವೆಯ ಹೆಸರಿನಲ್ಲಿ ಕಳ್ಳಸಾಗಣೆಗಾಗಿ ಹುಡುಗಿಯರನ್ನು ಕಳಿಸುವ ಕೆಲಸವನ್ನು ಇಲ್ಲಿ ಮಾಡಲಾಗುತ್ತದೆ.(ದಕ್ಷಿಣ ಭಾರತದಲ್ಲಿ ಇಂತಹ ಪ್ರಕರಣಗಳು ಈಗಾಗಲೇ ವರದಿಯಾಗಿವೆ.) ಎಂದು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಸಿಡಬ್ಲ್ಯೂಸಿ ಮುಂದೆ ಹುಡುಗಿಯರನ್ನು ಹಾಜರುಪಡಿಸಲು ಬಂದಾಗ, ಸಲ್ಮಾ ಮತ್ತು ಅವರ ಬಾಸ್ ಶಮೀರ್ ಗೂಂಡಾಗಳನ್ನು ಕರೆದರು, ಅವರು ಜಗಳವಾಡಲು ಪ್ರಯತ್ನಿಸಿದರು, ಪೋಲೀಸರ ಮಧ್ಯಸ್ಥಿಕೆಯಲ್ಲಿ ಗೂಂಡಾಗಳನ್ನು ನಿಯಂತ್ರಿಸಿದಾಗ, ಒಬ್ಬ ಗೂಂಡಾ ಯಾರನ್ನೋ ಕರೆದನು. ಮತ್ತು ಜನಸಂದಣಿಯನ್ನು ಕರೆಯಲು ಮಸೀದಿಯಿಂದ ಪ್ರಕಟಣೆಯನ್ನು ಮಾಡಲು ಕೇಳಲಾಯಿತು.

ಪೊಲೀಸರ ಸಲಹೆ ಮೇರೆಗೆ ಮಹಿಳಾ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಠಾಣೆಗೆ ಬಂದಿದ್ದೇವೆ.

ನಾವು ಬೆಂಗಳೂರು ಈಶಾನ್ಯ ಸಂಪಿಗಹಳ್ಳಿ ಪೊಲೀಸ್ ಠಾಣೆಯಲ್ಲಿ ಕುಳಿತಿದ್ದೇವೆ, ಪೊಲೀಸ್ ಠಾಣೆಯ ಹೊರಗೆ ಗೂಂಡಾಗಳು ನಮಗಾಗಿ ಕಾಯುತ್ತಿದ್ದಾರೆ, ಎಫ್‌ಐಆರ್ ಬರೆಯಲು ಪೊಲೀಸರು ನಿರಾಕರಿಸಿದ್ದಾರೆ. ಕರ್ನಾಟಕ ಸರ್ಕಾರ ತುಷ್ಟೀಕರಣದಿಂದಾಗಿ ಅಪರಾಧಿಗಳ ಮುಂದೆ ತಲೆಬಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...