ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜಾನಕಲ್ ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿ ಬಂದಿದೆ.
ಪಿಡಿಒ ಶಿವಕುಮಾರ್ ವಿರುದ್ಧ ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ದೇವರಾಜು ಎಂಬುವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಧಿಕಾರಿ ಕಚೇರಿಗೆ ದೂರು ನೀಡಿದ್ದಾರೆ. ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಸಮೇತ ನೀಡಿದ್ದಾರೆ.
ತಾಲೂಕು ಪಂಚಾಯಿತಿ ಇಒ ಮತ್ತು ಇತರೆ ಅಧಿಕಾರಿಗಳಿಗೆ ಪಾಲು ಕೊಡಬೇಕೆಂದು ಹಣ ಕೇಳಿದ್ದಾರೆ. ನರೇಗಾ ಕಾಮಗಾರಿ ಬಿಲ್ ಮಾಡಲು ಪಿಡಿಒ 40% ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಮೇಲೆ ದೂರು ನೀಡಲಾಗಿದೆ.